ಕೆ.ಎನ್.ಪಿ.ವಾರ್ತೆ,ಬೀಳಗಿ,ಏ.18;

ಪಟ್ಟಣದ ಕೆ.ಇ.ಬಿ ಕಾಲನಿಯಲ್ಲಿರುವ ಹನುಮಾನ ಮಂದಿರಕ್ಕೆ ಏಪ್ರೀಲ್ 18 ರಂದು ಕಳಸದ ಪ್ರತಿಷ್ಠಾಪನೆಯನ್ನು ಮಾಡಲಾಯಿತು.

ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತ, ಡಾ.ಅಂಬೇಡ್ಕರ್ ವೃತ್ತ ಹಾಗೂ ಮಹಾತ್ಮಾ ಗಾಂಧಿ ವೃತ್ತದ ಮೂಲಕ ಸುಮಂಗಲೆಯರ ಕುಂಭ ಹಾಗೂ ಆರತಿಯೊಂದಿಗೆ ಮೆರವಣಿಗೆಯಲ್ಲಿ ಪಂಚ ಕಳಸಗಳನ್ನು ತೆಗೆದುಕೊಂಡು ಬರಲಾಯಿತು.

ನಂತರ ಪೂಜಾ ಕೈಂಕರ್ಯಗಳೊಂದಿಗೆ ಕಳಸಗಳನ್ನು ಪ್ರತಿಷ್ಠಾಪಿಸಲಾಯಿತು. ಆಗಮಿಸಿದ ಭಕ್ತಾದಿಗಳಿಗೆ ಅನ್ನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಸಂಗನಬಸಪ್ಪ ಕೋಲ್ಹಾರ, ಎಮ್.ಟಿ.ದೊಡಮನಿ. ಪ್ರತಿಭಾ ನಾವಲಗಿ, ವಿಜಯಕುಮಾರ ಸವದಿ ಹಾಗೂ ಎಚ್.ಎಮ್.ಕರಡಿ ಮುಂತಾದವರು ಪಾಲ್ಗೊಂಡಿದ್ದರು.

ವರದಿ : ಬಸವರಾಜ್ ಬಾಬು ಕೋರಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.