ಕೆ.ಎನ್.ಪಿ.ವಾರ್ತೆ,ಮುಂಬೈ,ನ.23;

ತೀವ್ರ ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಳೆದ ರಾತ್ರಿಯಿಂದೀಚೆಗೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಎನ್ ಸಿಪಿ, ಬಿಜೆಪಿಗೆ ಬೆಂಬಲ ನೀಡಿದೆ.

ಇಂದು ರಾಜಭವನದಲ್ಲಿ ನಡೆದ ದೀಢೀರ್ ಕಾರ್ಯಕ್ರಮದಲ್ಲಿ ಸಿಎಂ ಆಗಿ ಎರಡನೇ ಬಾರಿಗೆ ದೇವೇಂದ್ರ ಫಡ್ನವಿಸ್, ಡಿಸಿಎಂ ಆಗಿ ಎನ್ ಸಿಪಿಯ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಅಕ್ಟೋಬರ್ 24ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಹುದ್ದೆಗಾಗಿ ಶಿವಸೇನೆ ಕ್ಯಾತೆ ತೆಗೆದಿತ್ತು.

ಎರಡೂವರೆ ವರ್ಷ ಸಿಎಂ ಹುದ್ದೆ ಬಿಟ್ಟುಕೊಟ್ಟರೆ ಮಾತ್ರ ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಲು ಮುಂದೆ ಬರುತ್ತೇವೆ.

ಇಲ್ಲದಿದ್ದರೆ ಬಿಜೆಪಿ ಜೊತೆ ಸಖ್ಯವೇ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿ ಎನ್ ಸಿಪಿ, ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಲು ಇಷ್ಟು ದಿನ ಕಸರತ್ತು ನಡೆಸಿತ್ತು.

ಈ ಮಧ್ಯೆ ರಾಜ್ಯಪಾಲರು ಸರ್ಕಾರ ರಚನೆಗೆ ಬಿಜೆಪಿ, ಶಿವಸೇನೆ, ಕಾಂಗ್ರೆಸ್ ಪಕ್ಷಗಳಿಗೆ ಸಹ ಆಹ್ವಾನ ನೀಡಿದ್ದರು. ಅವರು ನಿಗದಿಪಡಿಸಿದ ದಿನಾಂಕದೊಳಗೆ ಸರ್ಕಾರ ರಚನೆ ಮಾಡಲು ಸಾಧ್ಯವಾಗದ ಕಾರಣ ರಾಷ್ಟ್ರಪತಿ ಆಡಳಿತ ಜಾರಿಗೆ ತರಲಾಯಿತು.

ಆನಂತರ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಲು ತೀವ್ರ ಕಸರತ್ತು ನಡೆಸಿತು. ಬಿಜೆಪಿ ಜೊತೆ ಮೈತ್ರಿ ಇನ್ನು ಮುಗಿದ ಅಧ್ಯಾಯ ಎಂದು ಹೇಳಿತ್ತು.

ಈ ಮಧ್ಯೆ ನಿನ್ನೆ ಶಿವಸೇನೆ ಮತ್ತು ಎನ್ ಸಿಪಿ ನಾಯಕರು ಸಭೆ ಸೇರಿ ಸರ್ಕಾರ ರಚನೆಗೆ ತೀರ್ಮಾನಿಸಿ ಉದ್ಧವ್ ಠಾಕ್ರೆಯವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ನಿನ್ನೆ ಸಾಯಂಕಾಲ ಎನ್ ಸಿಪಿ ವರಿಷ್ಠ ಶರದ್ ಪವಾರ್ ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದರು.

ಆದರೆ ರಾತ್ರೋರಾತ್ರಿ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಎನ್ ಸಿಪಿ, ಬಿಜೆಪಿಗೆ ಬೆಂಬಲ ನೀಡಿ ಇಂದು ಬೆಳಗ್ಗೆ ತರಾತುರಿಯಲ್ಲಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸುವ ಮೂಲಕ ಒಂದು ತಿಂಗಳ ಮಹಾಡ್ರಾಮಾಕ್ಕೆ ತೆರೆಬಿದ್ದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.