ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.20;

ಮುಂದಿನ ಎರಡು ದಿನ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಒಡಿಶಾ, ಬಿಹಾರ, ಉತ್ತರ ಪ್ರದೇಶ, ಹರ್ಯಾಣ, ರಾಜಸ್ಥಾನ, ಗುಜರಾತ್, ತೆಲಂಗಾಣ, ಛತ್ತೀಸ್‌ಗಢದಲ್ಲಿ ಒಣಹವೆ ಮುಂದುವರೆಯಲಿದ್ದು, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಮಳೆಯಾಗಲಿದೆ. 

ಬೆಂಗಳೂರಲ್ಲಿ ಗುರುವಾರ ಬೆಳಗ್ಗೆಯಿಂದಲೇ ಮಳೆ ಆರಂಭವಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಗರಿಷ್ಠ 29.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.3 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ಗರಿಷ್ಠ 29.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಗಾಳಿ ಬೀಸುವಿಕೆ ವೇಗ 30-40 ಕಿ.ಮೀ ಇದೆ. ಹೀಗಾಗಿ ನವೆಂಬರ್ 20-21ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.