ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.20;

ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರಕಾರ ಇದೀಗ ಪರಿಹಾರ ಘೋಷಣೆ ಮಾಡಿದೆ.

ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿದ್ದ ಉನ್ನತ ಮಟ್ಟದ ಸಮಿತಿ ಕೇಂದ್ರದಿಂದ ಹೆಚ್ಚುವರಿ ನೆರವು ಬಿಡುಗಡೆಗೆ ಇಂದು ಒಪ್ಪಿಗೆ ಸೂಚಿಸಿದೆ.

ಕರ್ನಾಟಕ, ಒಡಿಶಾ ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ನೈಸರ್ಗಿಕ ವಿಪತ್ತುಗಳಿಗೆ ಒಟ್ಟಾರೆ 4432.10 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ರಾಜ್ಯದಲ್ಲಿನ ಹಿಂಗಾರು ಅವಧಿಯ ಬರ ಪರಿಸ್ಥಿತಿಗಾಗಿ 1029.39 ಕೋಟಿ ರೂ., ಒಡಿಶಾದಲ್ಲಿ ಚಂಡಮಾರು ಫನಿಯಿಂದಾದ ಹಾನಿಗೆ 3338.22 ಕೋಟಿ ರೂ. ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ಹಿಮಪಾತದಿಂದಾದ ನಷ್ಟ ಪರಿಹಾರವಾಗಿ 64.49 ಕೋಟಿ ರೂ. ನೆರವು ಬಿಡುಗಡೆ ಮಾಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.