ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.02;

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ (85) ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಮೃತರು ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ.

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಬನಶಂಕರಿ ನಿವಾಸದಲ್ಲಿ ಹಿರಣ್ಣಯ್ಯ ಅವರ ಪಾರ್ಥಿವ ಶರೀರವನ್ನು ತಂದ ನಂತರ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು, ಗಣ್ಯರು ಅಂತಿಮ ದರ್ಶನ ಪಡೆದರು. ಸಾರ್ವಜನಿಕರು ಕೂಡ ಹಿರಣ್ಣಯ್ಯ ಅವರಿಗೆ ಅಂತಿಮ ನಮನ ಸಲ್ಲಿಸಿದರು.

1934 ಫೆಬ್ರವರಿ 15 ರಂದು ಮೈಸೂರಿನಲ್ಲಿ ಜನಿಸಿದ್ದ ಮಾಸ್ಟರ್ ಹಿರಣ್ಣಯ್ಯ ಮಾತಿನ ಮಲ್ಲ ಎಂದೇ ಚಿರಪರಿಚಿತರಾಗಿದ್ದರು. ವೃತ್ತಿ ರಂಗಭೂಮಿಯಲ್ಲಿ ತಮ್ಮದೇ ಆದ ವಿಶಿಷ್ಠ ಛಾಪು ಮೂಡಿಸಿದ್ದರು.

ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂತವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು.

ಕೇರ್ ಆಫ್ ಪುಟ್ ಪಾತ್, ನಂ.73 ಶಾಂತಿ ನಿವಾಸ, ಗಜ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದ ಮಾಸ್ಟರ್ ಹಿರಣ್ಣಯ್ಯ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.