ಕೆ.ಎನ್.ಪಿ.ವಾರ್ತೆ,ಮಡಿಕೇರಿ,ಆ.30;

ನಟ ಹುಚ್ಚ ವೆಂಕಟ್ ಮಡಿಕೇರಿಯಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಕಾರಿನ ಗಾಜು ಪುಡಿಪುಡಿ ಮಾಡಿದ್ದು ಇದನ್ನು ಕಂಡ ಸ್ಥಳೀಯರು ವೆಂಕಟ್ ಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನ ಗಾಜನ್ನು ವೆಂಕಟ್ ಕಲ್ಲಿನಿಂದ ಹೊಡೆದು ಪುಡಿಪುಡಿ ಮಾಡಿದರು. ನಂತರ ಡ್ರೈವರ್ ಪಕ್ಕದ ಡೋರ್ ಅನ್ನು ಕೀಳಲು ಮುಂದಾದಾಗ ಅಲ್ಲಿ ಸೇರಿದ್ದ ಜನರು ವೆಂಕಟ್ ನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ.

ವೆಂಕಟ್ ಹುಚ್ಚಾಟ ಮೀತಿ ಮೀರಿದಾಗ ಸ್ಥಳಕ್ಕೆ ಬಂದ ಮಡಿಕೇರಿ ಪೊಲೀಸರು ವೆಂಕಟ್ ನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೆ ನಟ ಹುಚ್ಚ ವೆಂಕಟ್ ಚೆನ್ನೈನಲ್ಲಿ ಅಲೆದಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ರಾಂಧವ ಚಿತ್ರತಂಡ ವೆಂಕಟ್ ರನ್ನು ಗುರ್ತಿಸಿ ಅವರನ್ನು ಬೆಂಗಳೂರಿಗೆ ಕರೆತರಲು ಯತ್ನಿಸಿತ್ತು. ಆದ್ರೆ ಚಿತ್ರತಂಡದ ಮನವಿಗೆ ವೆಂಕಟ್ ಸ್ಪಂದಿಸಿರಲಿಲ್ಲ. ಧನ ಸಹಾಯ ಮಾಡಿದ್ರೂ ವೆಂಕಟ್ ಹಣ ಪಡೆದಿರಲಿಲ್ಲ. ಹುಚ್ಚ ವೆಂಕಟ್ ಅಲೆದಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.