ಕೆ.ಎನ್.ಪಿ.ವಾರ್ತೆ,ದುಬೈ,ಸೆ.30;

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ತಾಜಾ ಏಕದಿನ ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ನಾಯಕರುಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.

ನಾಯಕನ ಜವಾಬ್ದಾರಿಯ ನಡುವೆಯೂ ಉತ್ತಮ ಬ್ಯಾಟಿಂಗ್ ಮಾಡಿದ್ದ ರೋಹಿತ್, 1 ಸೆಂಚುರಿ ಹಾಗೂ 2 ಅರ್ಧಶತಕದ ನೆರವಿನಿಂದ 317 ರನ್ ಗಳಿಸಿ ಟಾಪ್ 2 ಸ್ಥಾನಕ್ಕೇ ಏರಿದ್ದರೆ, ರನ್ ಮಿಷನ್ ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಎರಡು ಶತಕ ಸೇರಿದಂತೆ ಒಟ್ಟು 342 ರನ್ ಗಳಿಸಿ ಏಷ್ಯಾಕಪ್ನಲ್ಲಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನವಾಗಿರುವ ಶಿಖರ್ ಧವನ್ ಐದನೇ ಸ್ಥಾನಕ್ಕೆ ತಲುಪಿದ್ದಾರೆ.

ಆಫ್ಘಾನಿಸ್ಥಾನದ ಶ್ರೇಷ್ಠ ಬೌಲರ್ ರಶೀದ್ಖಾನ್ ನಂಬರ್ 1 ಅಲ್ರೌಂಡರ್ ಆಗಿ ಬಿಂಬಿಸಿಕೊಂಡಿದ್ದರೆ, ಭಾರತದ ವೇಗಿ ಬೂಮ್ರಾ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಕುಲ್ದೀಪ್ ಯಾದವ್ (3), ರವೀಂದ್ರಜಾಡೇಜಾ (39) ರ್ಯಾಂಕಿಂಗ್ನಲ್ಲಿ ಗುರುತಿಸಿಕೊಂಡಿದ್ದು, ಭಾರತದ ಯಜುವೇಂದ್ರ ಚಹಾಲ್ 4ನೆ ಶ್ರೇಷ್ಠ ಅಲ್ರೌಂಡರ್ ಆಗಿ ಗಮನ ಸೆಳೆದಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.