ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಸೆ.01;

ಐಸಿಯೂನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ 30 ವರ್ಷದ ಮಹಿಳೆಯ ಮೇಲೆ 50 ವರ್ಷದ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯವೆಸಗಿ ಹೀನ ಕೃತ್ಯ ನಡೆಸಿದ್ದಾನೆ.

ಡೆಲಿವರಿ ಸಮಯದಲ್ಲಿ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದರಿಂದ ಆಕೆಯನ್ನು ವೆಂಟಿಲೇಟರ್ ನಲ್ಲಿಡಲಾಗಿತ್ತು. ಐಸಿಯುನಲ್ಲಿ ಯಾರು ಇಲ್ಲದ ಸಮಯದಲ್ಲಿ ನಿತ್ರಾಣಗೊಂಡಿದ್ದ ಮಹಿಳೆಯ ಮೇಲೆ 50 ವರ್ಷದ ಅಚ್ಯುತ್ ರಾವ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಕಳೆದ ಆಗಸ್ಟ್ 26ರಂದು ಈ ಕೃತ್ಯ ನಡೆದಿದ್ದು ಮಹಿಳೆ ಸಂಪೂರ್ಣವಾಗಿ ಚೇತರಿಸಿಕೊಂಡು ನಂತರ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಕೂಡಲೇ ಪೋಷಕರು ಬಂಜಾರಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.