ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.19;

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ ಮತ್ತೋರ್ವ ಪ್ರಚಾರಕನನ್ನು ಎಸ್ಐಟಿ ಬಂಧಿಸಿದೆ.

ಎಸ್ಐಟಿ ಅಧಿಕಾರಿ ಎಸ್ ಗಿರೀಶ್ ಅವರ ನೇತೃತ್ವದ ಎಸ್ಐಟಿ ತಂಡ ಬನ್ನೇರುಘಟ್ಟದಲ್ಲಿ ಉಮರ್ ಶರೀಫ್ (42) ಎಂಬಾತನನ್ನು ಬಂಧಿಸಿದ್ದು ಜುಲೈ 22ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಕಳೆದ 5 ವರ್ಷಗಳಿಂದ ಐಎಂಎ ಮತ್ತು ಮನ್ಸೂರ್ ಅಲಿ ಖಾನ್ ಅವರ ಪ್ರಚಾರಕನಾಗಿ ಉಮರ್ ಶರೀಷ್ ಕೆಲಸ ಮಾಡುತ್ತಿದ್ದ ಅಲ್ಲದೆ ಬಂಧಿತ ಆರೋಪಿ ಅಲ್ ಬಷೀರ್ ಹೆಸರಿನಲ್ಲಿ ಶಾಲೆಯನ್ನು ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಐಎಂಎ ವಂಚನೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್ಐಟಿ ತಂಡವನ್ನು ರಚಿಸಿದೆ. ಪ್ರಕರಣ ಕೈಗೆತ್ತಿಕೊಂಡಿರುವ ಎಸ್ಐಟಿ ತಂಡ ಈಗಾಗಲೇ ಹಲವರನ್ನು ಬಂಧಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.