ಕೆ.ಎನ್.ಪಿ.ವಾರ್ತೆ,ಮುಂಬೈ,ಫೆ.20;

2019ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಮೊದಲ 17 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆಯಾಗಿದೆ. ಆದರೆ ಇದರಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯನ್ನೂ ನೀಡಲಾಗಿದೆ.

ಈ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಐಪಿಎಲ್ ವೇಳಾಪಟ್ಟಿ ಬಗ್ಗೆ ಹಲವು ಗೊಂದಲಗಳಿವೆ. ಆದರೆ ಇದೀಗ ಸದ್ಯಕ್ಕೆ ತಾತ್ಕಾಲಿಕವೆಂಬಂತೆ ಮೊದಲ 17 ಪಂದ್ಯಗಳ ದಿನಾಂಕ ಪ್ರಕಟಿಸಲಾಗಿದೆ. ಒಂದು ವೇಳೆ ಈ ಸಂದರ್ಭದಲ್ಲಿ ಚುನಾವಣೆ ದಿನಾಂಕ ಘೋಷಣೆಯಾದರೆ, ಈ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಲಿದೆ.

ಮಾರ್ಚ್ 23 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯ ಚೆನ್ನೈಯಲ್ಲಿ ನಡೆಯಲಿದೆ. ಮಾರ್ಚ್ 24 ರಂದು ಮುಂಬೈ ಇಂಡಿಯನ್ಸ್-ಡೆಲ್ಲಿ ಡೇರ್ ಡೆವಿಲ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್-ಸನ್ ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ ನಡೆಯಲಿದೆ.

ಉಳಿದ ಪಂದ್ಯಗಳ ವಿವರಗಳು ಇಂತಿವೆ:

ಮಾರ್ಚ್ 25: ರಾಜಸ್ಥಾನ್ ರಾಯಲ್ಸ್-ಕಿಂಗ್ಸ್ ಇಲೆವೆನ್ ಪಂಜಾಬ್ (ಜೈಪುರದಲ್ಲಿ)
ಮಾರ್ಚ್ 26: ಡೆಲ್ಲಿ ಡೇರ್ ಕ್ಯಾಪಿಟಲ್ಸ್-ಚೆನ್ನೈ ಸೂಪರ್ ಕಿಂಗ್ಸ್ (ದೆಹಲಿ)
ಮಾರ್ಚ್ 27: ಕೋಲ್ಕೊತ್ತಾ ನೈಟ್ ರೈಡರ್ಸ್-ಕಿಂಗ್ಸ್ ಇಲೆವೆನ್ ಪಂಜಾಬ್ (ಕೋಲ್ಕೊತ್ತಾ)
ಮಾರ್ಚ್ 28: ರಾಯಲ್ ಚಾಲೆಂಜರ್ಸ್ ಬೆಂಗಳೂರು-ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 29: ಸನ್ ರೈಸರ್ಸ್ ಹೈದರಾಬಾದ್-ರಾಜಸ್ಥಾನ್ ರಾಯಲ್ಸ್ (ಹೈದರಾಬಾದ್)
ಮಾರ್ಚ್‍ 30: ಕಿಂಗ್ಸ್ ಇಲೆವೆನ್ ಪಂಜಾಬ್-ಮುಂಬೈ ಇಂಡಿಯನ್ಸ್ (ಮೊಹಾಲಿ)
ಡೆಲ್ಲಿ ಕ್ಯಾಪಿಟಲ್ಸ್-ಕೋಲ್ಕೊತ್ತಾ ನೈಟ್ ರೈಡರ್ಸ್ (ದೆಹಲಿ)
ಮಾರ್ಚ್ 31: ಸನ್ ರೈಸರ್ಸ್ ಹೈದರಾಬಾದ್-ರಾಯಲ್ ಚಾಲೆಂಜರ್ಸ್ ಬೆಂಗಳೂರು (ಹೈದರಾಬಾದ್)
ಚೆನ್ನೈ ಸೂಪರ್ ಕಿಂಗ್ಸ್-ರಾಜಸ್ಥಾನ್ ರಾಯಲ್ಸ್ (ಚೆನ್ನೈ)
ಏಪ್ರಿಲ್ 1: ಕಿಂಗ್ಸ್ ಇಲೆವೆನ್ ಪಂಜಾಬ್-ಡೆಲ್ಲಿ ಕ್ಯಾಪಿಟಲ್ಸ್ (ಮೊಹಾಲಿ)
ಏಪ್ರಿಲ್ 2: ರಾಜಸ್ಥಾನ್ ರಾಯಲ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು (ಜೈಪುರ)
ಏಪ್ರಿಲ್ 3: ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್ (ಮುಂಬೈ)
ಏಪ್ರಿಲ್ 4: ಡೆಲ್ಲಿ ಕ್ಯಾಪಿಟಲ್ಸ್-ಸನ್ ರೈಸರ್ಸ್ ಹೈದರಾಬಾದ್ (ದೆಹಲಿ)
ಏಪ್ರಿಲ್ 5: ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೋಲ್ಕೊತ್ತಾ ನೈಟ್ ರೈಡರ್ಸ್ (ಬೆಂಗಳೂರು)

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.