ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.13;

ನಿರ್ಭಯ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆದೇಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೋರಾ, ಅಪರಾಧಿಯೊಬ್ಬ ಸಲ್ಲಿಸಿರುವ ಪರಿಶೀಲನಾ ಅರ್ಜಿ ಸುಪ್ರೀಂಕೋರ್ಟ್ ಮುಂದೆ ಬಾಕಿ ಇರುವ ಹಿನ್ನಲೆಯಲ್ಲಿ ಅರ್ಜಿ ಕುರಿತು ನಿರ್ಧಾರವನ್ನು ಡಿಸೆಂಬರ್ 18ಕ್ಕೆ ಮುಂದೂಡಿದೆ.

ಸುಪ್ರೀಂಕೋರ್ಟ್ ಮುಂದೆ ಬಾಕಿ ಇರುವ ಮರು ಪರಿಶೀಲನಾ ಅರ್ಜಿ ಡಿಸೆಂಬರ್ 17ರಂದು ವಿಚಾರಣೆಗೆ ಬರಲಿದೆ, ಅಪೆಕ್ಸ್ ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆಯೋ ಕಾದು ನೋಡೋಣ. ಹಾಗಾಗಿ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡುವುದಾಗಿ ನ್ಯಾಯಾಧೀಶರು ತೀರ್ಪು ನೀಡಿದರು.

2012ರ ಡಿಸೆಂಬರ್ 16 ರಂದು ದಕ್ಷಿಣ ದೆಹಲಿಯ ಚಲಿಸುವ ಬಸ್ಸೊಂದರಲ್ಲಿ ಆರು ಮಂದಿ, 23 ವರ್ಷದ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ನಂತರ ಕ್ರೂರವಾಗಿ ಹಲ್ಲೆ ನಡೆಸಿ ನಂತರ ಆಕೆಯನ್ನು ಚಲಿಸುವ ಬಸ್ಸಿನಿಂದ ಹೊರಗೆ ತಳ್ಳಿದ್ದರು. ತೀವ್ರ ಗಾಯಗಳಿಂದಾಗಿ ವಿದ್ಯಾರ್ಥಿನಿ ಡಿಸೆಂಬರ್ 29ರಂದು ಸಿಂಗಾಪುರದ ಮೌಂಟ್ ಎಲಿಜಬತ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.

ಕಳೆದ ವರ್ಷದ ಜುಲೈನಲ್ಲಿ, ಪ್ರಕರಣದ ಮೂವರು ಅಪರಾಧಿಗಳಾದ ಮುಖೇಶ್, ಪವನ್ ಗುಪ್ತಾ ಹಾಗೂ ವಿನಯ್ ಶರ್ಮಾ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ. 2017ರ ತೀರ್ಪು ಪರಾಮರ್ಶಿಸಲು ಯಾವುದೇ ಆಧಾರಗಳಿಲ್ಲ ಎಂದು ಹೇಳಿತ್ತು.

ಆರೋಪಿಗಳ ಪೈಕಿ ಒಬ್ಬನಾಗಿದ್ದ ರಾಮ್ ಸಿಂಗ್, ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೊಳಗಾಗಿದ್ದ, ತಪ್ಪಿತಸ್ಥನಾಗಿದ್ದ ಬಾಲಾಪರಾಧಿ ಮೂರು ವರ್ಷಗಳ ಶಿಕ್ಷೆಯ ನಂತರ ಸುಧಾರಣಾ ಗೃಹದಿಂದ ಬಿಡುಗೆಡೆ ಹೊಂದಿದ್ದಾನೆ.

ಗಲ್ಲು ಶಿಕ್ಷೆ ಜಾರಿಗೆ ನ್ಯಾಯಾಲಯ ಅನುಮತಿ ನೀಡಲು ಯಾವುದೇ ಅಡೆತಡೆಗಳು ಇಲ್ಲದ ಕಾರಣ, ಮರಣ ದಂಡನೆ ವಿಧಿಸಲು ಅನುಮತಿ ನೀಡಬೇಕು ಎಂದು ಪ್ರಾಸಿಕ್ಯೂಷನ್ ಮನವಿ ಮಾಡಿತು.

ಅಪರಾಧಿ ಅಕ್ಷಯ್ ಕುಮಾರ್ ಸಲ್ಲಿಸಿರುವ ಮರು ಪರಿಶೀಲನಾ ಆರ್ಜಿ ಡಿಸೆಂಬರ್ 17ರಂದು ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಇದೆ ಎಂದು ಅಪರಾಧಿಗಳ ಪರ ವಕೀಲರು ನ್ಯಾಯಾಲಯದ ಮುಂದೆ ವಾದಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.