ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಏ.19;

ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಂ ಸಿದ್ದೇಶ್ವರ್ ಪರ ನಿನ್ನೆ ಸಂಜೆ ಶಾಸಕ ಶ್ರೀರಾಮುಲು ಜಗಳೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಪಟ್ಟಣದ ದೊಡ್ಡ ಮಾರಿಕಾಂಬಾ ದೇವಸ್ಥಾನ, ಮಹಾತ್ಮ ಗಾಂಧಿ ಬಸ್ ನಿಲ್ದಾಣ ರಸ್ತೆ ಸೇರಿದಂತೆ ವಿವಿಧೆಡೆ ಜಂಟಿ ರೋಡ್ ಶೋ ನಡೆಸಿದ ಶ್ರೀರಾಮುಲು ಹಾಗೂ ಅಭ್ಯರ್ಥಿ ಜಿ.ಎಂ ಸಿದ್ದೇಶ್ವರ್, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದರು.

ಜಗಳೂರಿನಲ್ಲಿ ಶಾಸಕ ಶ್ರೀರಾಮುಲು ರೋಡ್ ಶೋ

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಸೋಲು ಖಚಿತ. ಜನರು ಈಗ ನಿಖಿಲ್ ಎಲ್ಲಿದ್ದೀಯಪ್ಪಾ ಎನ್ನುತ್ತಿದ್ದಾರೆ. ಚುನಾವಣಾ ಫಲಿತಾಂಶ ಬಂದಮೇಲೆ ಕುಮಾರಸ್ವಾಮಿ ಎಲ್ಲಿದ್ದೀಯಪ್ಪಾ ಎಂದು ಹುಡುಕುವ ಪರಿಸ್ಥಿತಿ ಬರುತ್ತೆ. ಜೆಡಿಎಸ್ ನವರು ಭ್ರಷ್ಟಾಚಾರದ ಹಣದಿಂದ ಮಂಡ್ಯ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಶ್ರೀರಾಮುಲು ಜೆಡಿಎಸ್ ವಿರುದ್ದ ಹರಿಹಾಯ್ದರು.

ಬಳಿಕ ಮಾತನಾಡಿದ ಜಿ.ಎಂ ಸಿದ್ದೇಶ್ವರ್ ಮೇ.23 ರ ಬಳಿಕ ಬಿ ಎಸ್ ಯಡಿಯೂರಪ್ಪ ಸಿಎಂ ಆಗುವುದು ಸೂರ್ಯ ಚಂದ್ರ ರಷ್ಟೆ ಸತ್ಯ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಫಲಿತಾಂಶದ ಮಾಹಿತಿ ಪಡೆಯುತ್ತಾರೆ. ಅವರಿಗೆ ಸೋಲಿನ ಅರಿವಾಗಲಿದ್ದು, ಸರ್ಕಾರ ಪತನವಾಗಲಿದೆ. ಮುಂದೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.