ಕೆ.ಎನ್.ಪಿ.ವಾರ್ತೆ,ಮುಂಡರಗಿ,ಜ.05;

ಕಾರ್ಮಿಕ ವಿರೋಧಿ, ಕೇಂದ್ರ ಸರ್ಕಾರದ ಜನ ವಿರೋಧಿ, ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 10 ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ, ಜನವರಿ 08 ರಂದು ರಾಷ್ಟ್ರವ್ಯಾಪ್ತಿ ಮುಷ್ಕರ ಕೈಗೊಂಡಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತ ವ್ಯಾಪಾರ ವಹಿವಾಟು ಬಂದ್ ಮಾಡಿ ನಮಗೆ ಸಹಕಾರ ನೀಡಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಗಿದೆ. ಜ.8ರಂದು ಬೆಳಗ್ಗೆ 10:30ಕ್ಕೆ ಪುರಸಭೆ ಮೈದಾನದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಸೀಲ್ದಾರ್ ಕಚೇರಿಗೆ ತೆರಳಿ ಅಲ್ಲಿ ವಿವಿಧ ವಿಷಯ ಕುರಿತು ಬಹಿರಂಗ ಸಭೆ ನಡೆಸಿ ಮನವಿ ಸಲ್ಲಿಸುತ್ತೇವೆ ಎಂದರು.

ರಾಷ್ಟ್ರೀಯ ಸಮಾನ ಕನಿಷ್ಠ ವೇತನ 21ಸಾವಿರ ರೂ.ನಿಗದಿಯಾಗಬೇಕು. ಮಹದಾಯಿ ನ್ಯಾಯಾಧೀಕರಣ ತೀರ್ಪಿನ ಅನ್ವಯ ಕೂಡಲೇ ಅಧಿಸೂಚನೆ ಹೊರಡಿಸಲು ಮತ್ತು ಕಳಾಸ ಬಂಡೂರಿ ಬಾಕಿ ಇರುವ ಕಾಮಗಾರಿ ಪ್ರಾರಂಭಿಸಬೇಕು. ಎಲ್ಲರಿಗೂ ಸರ್ಕಾರದಿಂದಲೇ 10 ಸಾವಿರ ರೂ.ಕನಿಷ್ಠ ಖಾತ್ರಿ ಪಿಂಚಣಿ ಜಾರಿಗೊಳಿಸುವುದು ಸೇರಿದಂತೆ ಮೊದಲಾದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು.

ಈ ವೇಳೆ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶ್ರೀಮತಿ ಸಿ.ವಿ.ಶೇಳಕೆ, ವಿಶಾಲಾಕ್ಷೀ ದೇವರಮನಿ, ಶಂಕರ ದೇವರಮನಿ, ಮಲ್ಲೇಶ ಪ್ಯಾಟಿ, ಕಮಲಾಕ್ಷೀ ಬಿಳಗಿ, ಇದ್ದರು.

ವರದಿ : ಕೋಗಳಿ ಶೇಖರ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.