ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.13;

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹಿನ್ನೆಡೆಯಾಗಿದೆ.

ಜೂ.11ರಂದು ನಡೆದಿದ್ದ ಬೆಂಗಳೂರಿನ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಜಯನಗರ ಕ್ಷೇತ್ರ ‘ಕೈ’ ಪಾಲಾಗಿದ್ದು, ಈ ಮೂಲಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 80ಕ್ಕೆ ಏರಿಕೆ ಕಂಡಿದೆ.

ಪುತ್ರಿ ಸೌಮ್ಯಾರೆಡ್ಡಿ ಅವರ ಪರವಾಗಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ರಾಮಲಿಂಗಾರೆಡ್ಡಿ ಚುರುಕಿನ ಪ್ರಚಾರ ನಡೆಸಿದ್ದರು. ಮೊದಲಿನಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡ ಸೌಮ್ಯಾ ಅವರು 54,457 ಮತಗಳನ್ನು ಗಳಿಸಿ ಒಟ್ಟು 2,889 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ.ಎನ್. ಪ್ರಹ್ಲಾದ್‌ಬಾಬು (51,568) ವಿರುದ್ಧ ಗೆಲುವು ಸಾಧಿಸಿದ್ದಾರೆ.

ಮೇ ತಿಂಗಳಿನಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲೇ ಬಿಜೆಪಿ ಅಭ್ಯರ್ಥಿ ಬಿ.ಎನ್‌.ವಿಜಯಕುಮಾರ್‌ ಹೃದಯಾಘಾತದಿಂದ ನಿಧನರಾಗಿದ್ದರು. ಇದರಿಂದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ನಂತರದಲ್ಲಿ ಬಿ.ಎನ್‌.ವಿಜಯಕುಮಾರ್‌ ಅವರ ಸಹೋದರ ಬಿ.ಎನ್. ಪ್ರಹ್ಲಾದ್‌ಬಾಬು ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

9513326661

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.