ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಏ.22;
ಕಾಂಗ್ರೆಸ್ ಮುಖಂಡ ದೀಪಕ್ ಕುಮಾರ್ ಸಿಂಗ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಬಾರಿ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ.
ಅನ್ಯ ಪಕ್ಷದ ಮುಖಂಡನಿಗೆ ಪಕ್ಷ ಟಿಕೆಟ್ ಕೊಟ್ಟಿರುವುದರಿಂದ ಬೇಸತ್ತು, ಕಾಂಗ್ರೆಸ್ ಮುಖಂಡ ದೀಪಕ್ ಕುಮಾರ್ ಸಿಂಗ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ತೊರೆದಿರುವ ದೀಪಕ್ ಕುಮಾರ್ ಸಿಂಗ್ ಜೆಡಿಎಸ್ ನಿಂದ ಸ್ಪರ್ಧೆಗಿಳಿಯಲಿದ್ದಾರೆ. ಈಗಾಗಲೇ ಜೆಡಿಎಸ್ ‘ಬಿ’ ಫಾರಂ ನೀಡಿದ್ದು, ಮಂಗಳವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.
ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೀಪಕ್ ಕುಮಾರ್ ಸಿಂಗ್, ‘27 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದರೂ ಸಹ ದೀರ್ಘಕಾಲದಿಂದ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದ್ದು, ಇದರಿಂದ ನೊಂದು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು.
ಈ ವೇಳೆ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಶಿವಪ್ಪ ಹಾಗೂ ಮುಖಂಡರು ಉಪಸ್ಥಿತರಿದ್ದರು.