ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.04;

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಭಾರೀ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಅವರು, ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.

‘ತುಮಕೂರಿನಲ್ಲಿ ವ್ಯವಸ್ಥಿತವಾಗಿ ಖೆಡ್ಡಾ ತೋಡಿ ದೇವೇಗೌಡರನ್ನು ಸೋಲಿಸಲಾಯಿತು. ಜೋಡೆತ್ತಿನಂತೆ ಇರಬೇಕಾದ ಮೈತ್ರಿ ಪಕ್ಷಗಳು ಆ ರೀತಿ ಇರಲೇ ಇಲ್ಲ. ದೇವೇಗೌಡರನ್ನು ಮೈಸೂರಿನಿಂದ ಸ್ಪರ್ಧಿಸುವಂತೆ ಕೋರಿದರು. ಅದು ಕಾಂಗ್ರೆಸ್​ ಷಡ್ಯಂತ್ರದಿಂದ ಸಾಧ್ಯವಾಗಲಿಲ್ಲ. ಮಂಡ್ಯದಲ್ಲೂ ಕಾಂಗ್ರೆಸ್ ನ ನಾಯಕರ ಕೊಂಕು ಮಾತುಗಳಿಂದ ಅಹಿಂದ ಮತಗಳು ಚದುರಿಹೋಗಿ, ಜೆಡಿಎಸ್ ​ಗೆ ಸೋಲು ಉಂಟು ಮಾಡಿತು.

ಸಮನ್ವಯ ಸಮಿತಿ ಕೇವಲ ನಾಮಕಾವಸ್ಥೆಯಂತೆ ಇತ್ತು. ಇದು ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿತ್ತೆ ಹೊರತು ಎರಡು ಪಕ್ಷಗಳ ಸಮನ್ವಯ ಸಾಧಿಸುವ ಕೆಲಸವನ್ನು ಮಾಡಲಿಲ್ಲ, ಇಲ್ಲಿ ನನಗಾಗಲಿ ಮತ್ತು ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ನೀಡಲಿಲ್ಲ. ಈ ಎಲ್ಲ ಕಾರಣಗಳಿಂದ ನಾನು ಬೇಸತ್ತು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.