ಕೆ.ಎನ್.ಪಿ.ವಾರ್ತೆ,ಹಾವೇರಿ,ನ.23;

ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಚಳ್ಳಿಕೇರಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ಪರ ಮಾಜಿ ಶಾಸಕರಾದ ಎನ್.ಎಚ್. ಕೋನರೆಡ್ಡಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಣೇಬೆನ್ನೂರು ಕ್ಷೇತ್ರದ ಮತದಾರರು ಅಮೂಲ್ಯ ಮತವನ್ನು ಕೊಟ್ಟು ಆರ್.ಶಂಕರ್ ರನ್ನು ವಿಧಾನಸಭೆಗೆ ಆರಿಸಿ ಕಳಿಸಿದ್ದೀರಿ.

ಆದರೆ ಸ್ವಾರ್ಥಕ್ಕಾಗಿ ಬಿಜೆಪಿ ಸೇರಿ ಉಪಚುನಾವಣೆಗೆ ಕಾರಣರಾಗಿದ್ದಾರೆ. ಬಿಜೆಪಿ ಸೇರಿಕೊಂಡ ಅನರ್ಹರಿಗೆ ಮತದಾರರು ಈ ಬಾರಿ ತಕ್ಕ ಪಾಠ ಕಲಿಸಿರಿ. ರಾಜಕಾರಣದ ಮೌಲ್ಯ ಎತ್ತಿಹಿಡಿಯಲು ಕ್ಷೇತ್ರದ ಮತದಾರರಿಗೆ ಇದು ಸುವರ್ಣ ಅವಕಾಶವಾಗಿದೆ.

ಬಿಜೆಪಿಯವರಿಗೆ ಅಭಿವೃದ್ಧಿಪರ ಚಿಂತನೆ ಇಲ್ಲ. ಅನರ್ಹರನ್ನು ಸೇರಿಸಿಕೊಂಡಿರುವುದು ಅಧಿಕಾರಕ್ಕಾಗಿ ಅಲ್ಲದೇ ಬೇರೇನು ಎಂದರು.

ನಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಹಲಿಗೇರಿ ನೂರಕ್ಕೆ ನೂರು ಗೆಲ್ಲುವುದು ಸತ್ಯ ಎಂದು ತಿಳಿಸಿದರು.

ಜೆಡಿಎಸ್ ನಿಂದ ಬಿರುಸಿನ ಪ್ರಚಾರ : ಮಲ್ಲಿಕಾರ್ಜುನ ಹಲಗೇರಿ ಪರ ಕೋನರೆಡ್ಡಿ ಮತಯಾಚನೆ

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಕೆ.ಎಸ್ ಸಿದ್ದಬಸಪ್ಪ ಯಾದವ್, ರಾಜ್ಯ ಕಾರ್ಯದರ್ಶಿಯಾದ ಶಿವಕುಮಾರ್.ಮಠದ, ಜಿಲ್ಲಾ ವಕ್ತಾರರಾದ ಮಹಾಂತೇಶ್ ಬೇವಿ ಹಿಂಡಿ, ತಾಲೂಕ ಪ್ರಧಾನ ಕಾರ್ಯದರ್ಶಿಯಾದ ಪಿ.ಕೆ. ರಾಜನಹಳ್ಳಿ, ಶಂಕ್ರಣ್ಣ ಹಾದಿಮನಿ, ಗ್ರಾಮ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಶಾಸಕರ ರಾಜೀನಾಮೆಯಿಂದ ತೆರವಾದ 17 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪಚುನಾವಣೆ ನಡೆಯುತ್ತಿದೆ. ಈಗಾಗಲೇ ಚುನಾವಣೆಯ ಬಹುತೇಕ ಪ್ರಕ್ರಿಯೆಗಳು ಮುಗಿದಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.