ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.18;

ಮಾಜಿ ಪ್ರಧಾನಮಂತ್ರಿ, ಜೆಡಿಎಸ್​ ವರಿಷ್ಠ ಎಚ್.ಡಿ ದೇವೇಗೌಡ ಅವರು ಇಂದು 86ನೇ ಹುಟ್ಟಹಬ್ಬ ಆಚರಿಸಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರು ಶುಭಕೋರಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವೇಗೌಡ ಅವರು ಕುಟುಂಬ ಸಮೇತ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್​ ಮಾಡಿ ದೇವೇಗೌಡರಿಗೆ ಶುಭ ಕೋರಿದ್ದು, ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

ತಿರುಪತಿಯಿಂದ ನಗರಕ್ಕೆ ಮರಳಿದ ಅವರು ತಮ್ಮ ನಿವಾಸದಲ್ಲಿ ಅಭಿಮಾನಿಗಳು, ಹಿತೈಷಿಗಳು ಹಾಗೂ ಪಕ್ಷದ ಕಾರ್ಯಕರ್ತರಿಂದ ಹುಟ್ಟುಹಬ್ಬದ ಶುಭಾಶಯ ಸ್ವೀಕರಿಸಿದರು.

ಪತ್ನಿ ಚನ್ನಮ್ಮ, ಪುತ್ರರಾದ ಎಚ್‌.ಡಿ.ರೇವಣ್ಣ, ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಕುಟುಂಬ ಸದಸ್ಯರೊಟ್ಟಿಗೆ ಕೇಕ್‌ ಕತ್ತರಿಸಿ ದೇವೇಗೌಡರು ಸಂಭ್ರಮಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.