ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.24;
ಧಾರವಾಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಬಿ.ಸಿ.ಸತೀಶ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಆರ್. ಅಧಿಕಾರ ಹಸ್ತಾಂತರಿಸಿದರು.
ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಡಾ. ಬಿ.ಸಿ. ಸತೀಶ, ಈ ಹಿಂದೆ ಜಿಲ್ಲೆಯಲ್ಲಿ ಹೆಸ್ಕಾಂ ಪ್ರಧಾನ (ಆಡಳಿತ) ವ್ಯವಸ್ಥಾಪಕರಾಗಿ 2012 ರಿಂದ 2014ರವರೆಗೆ ಮತ್ತು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ 2014 ರಿಂದ 2016ರವರೆಗೆ ಸೇವೆ ಸಲ್ಲಿಸಿದ್ದಾರೆ.
ಜಿಲ್ಲಾ ಪಂಚಾಯತ ಸಿಇಓ ಆಗಿ ಕರ್ತವ್ಯಕ್ಕೆ ಹಾಜರಾಗುವ ಪೂರ್ವದಲ್ಲಿ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಗಣಿ ವಿಭಾಗದ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಬಿ.ಸಿ.ಸತೀಶ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಸ್.ಜಿ. ಕೊರವರ ಹಾಗೂ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ವರದಿ : ಚಂದ್ರು ಹಿರೇಮಠ ಧಾರವಾಡ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.