ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.23;
ಮಾರುತಿ ಗೌಡ ಎಂಬ ಜಿಮ್ ಟ್ರೈನರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ದುನಿಯಾ ವಿಜಯ್ ಬಂಧನಕ್ಕೆ ಒಳಗಾಗಿದ್ದಾರೆ.
ಮಾರುತಿ ಗೌಡ ಎಂಬವರನ್ನು ಕಿಡ್ನ್ಯಾಪ್ ಮಾಡಿದ ನಟ ದುನಿಯಾ ವಿಜಯ್ ಹಾಗೂ ಅವರ ತಂಡ, ಮಾರುತಿಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪಾನಿಪುರಿ ಕಿಟ್ಟಿ ನೀಡಿದ ದೂರಿನಡಿಯಲ್ಲಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಕಾಂಪಿಟೀಷನ್ ನಡೆಯುತ್ತಿತ್ತು. ಈ ವೇಳೆ ದುನಿಯಾ ವಿಜಯ್ ಮತ್ತು ತಂಡ ಟ್ರೈನರ್ ಮಾರುತಿ ಗೌಡ ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಇದೀಗ ಮಾರುತಿಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದುನಿಯಾ ವಿಜಯ್ ಮತ್ತು ಸಹಚರರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಹಿಂದೆ ದುನಿಯಾ ವಿಜಯ್ ಗೆ ಪಾನಿಪೂರಿ ಕಿಟ್ಟಿ ಜಿಮ್ ಟ್ರೇನರ್ ಆಗಿದ್ದರು. ಆದರೆ ಇತ್ತೀಚೆಗೆ ಇವರ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಪಾನಿಪುರ ಕಿಟ್ಟಿಯ ಮೇಲಿನ ದ್ವೇಷಕ್ಕೆ ಆತನ ಅಣ್ಣನ ಮಗ ಮಾರುತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೊಳಗಾದ ಮಾರುತಿಗೌಡ ಈಗ ನಟರಾದ ಯಶ್, ಅಜಯ್ ರಾವ್, ಪ್ರೇಮ್ ಗೂ ಜಿಮ್ ಟ್ರೇನರ್ ಆಗಿದ್ದಾರೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.