ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.24;

ಜಿಲ್ಲೆಯಲ್ಲಿ ಕಳೆದ 20 ತಿಂಗಳ ಅವಧಿಯ ಸೇವೆ ಅತ್ಯಂತ ತೃಪ್ತಿ ನೀಡಿದೆ. ಶಿಕ್ಷಣ, ಆರೋಗ್ಯ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಸೇರಿ ಎಲ್ಲ ಇಲಾಖೆಗಳು ಒಗ್ಗೂಡಿ ಇನ್ನೂ ಸಾಕಷ್ಟು ಕೆಲಸ ಮಾಡಲು ಸಾಧ್ಯವಿದೆ ಎಂದು ಜಿ.ಪಂ. ನಿರ್ಗಮಿತ ಸಿಇಓ ಸ್ನೇಹಲ್ ರಾಯಮಾನೆ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಏರ್ಪಡಿಲಾಗಿದ್ದ ಬೀಳ್ಕೊಡುವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವಿದ್ಯಾಕಾಶಿ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಗೆ ನಾಡಿನಲ್ಲಿ ವಿಶೇಷ ಸ್ಥಾನವಿದೆ. ಇಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿದೆ. ಧಾರವಾಡದಿಂದ ಉತ್ತಮ ನೆನಪುಗಳನ್ನು ಕೊಂಡೊಯ್ಯುತ್ತಿದ್ದೇನೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನೂತನ ಸಿಇಓ ಡಾ. ಬಿ.ಸಿ. ಸತೀಶ ಮಾತನಾಡಿ, ಎಲ್ಲರನ್ನೂ ಪದೇ ಪದೇ ಕರೆಯಿಸಿಕೊಳ್ಳುವ ಗುಣ ಧಾರವಾಡಕ್ಕೆ ಇದೆ. ಸ್ನೇಹಲ್ ಅವರು ಈ ಜಿಲ್ಲೆಯಲ್ಲಿ ಉತ್ತಮ ತಂಡ ಕಟ್ಟಿದ್ದಾರೆ, ಎಲ್ಲರೂ ಸೇರಿ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯೋಣ ಎಂದರು.

ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಜಿ.ಪಂ. ಉಪ ಕಾರ್ಯದರ್ಶಿ ಶಂಕರ ಕೊರವರ, ಉಪ ವಿಭಾಗಾಧಿಕಾರಿ ಮಹ್ಮದ್ ಜುಬೇರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮನೋಹರ ಮಂಡೋಲಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಗಿರಿಧರ ಕುಕನೂರ, ಪಿಡಿಓ ಜಗದೀಶ ಹಡಪದ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಮುನಿರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್.ಎಂ. ದೊಡ್ಡಮನಿ, ಡಿಮ್ಹಾನ್ಸ್ ಆಡಳಿತಾಧಿಕಾರಿ ಶಾರದಾ ಕೋಲಕಾರ, ಪಿಡಿಓ ಬೀಡಿಕರ್, ರೇಷ್ಮೆ ಉಪನಿರ್ದೇಶಕ ಎಸ್.ಜಿ. ದಾನಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಂದಕೂರ, ಎಸ್.ಎಸ್. ಕಾದ್ರೋಳಿ, ತಾ.ಪಂ. ಸಹಾಯಕ ನಿರ್ದೇಶಕ ಪ್ರಶಾಂತ ಮತ್ತಿತರ ಅಧಿಕಾರಿಗಳು ಇದ್ದರು.

ವರದಿ : ಚಂದ್ರು ಹಿರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.