ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.30;

ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರು ಸೋಮವಾರ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 31ರಂದು ಚುನಾವಣೆ ನಿಗದಿಪಡಿಸಿ ರಾಜ್ಯಪಾಲ ವಜುವಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಇಂದು ಬೆಳಗ್ಗೆ 12 ಗಂಟೆಯವರೆಗೆ ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಇನ್ನು, ನೂತನ ಸ್ಪೀಕರ್ ಆಗಿ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ನಾಲ್ಕು ಬಾರಿ ಶಾಸಕರಾಗಿರುವ ಬೋಪಯ್ಯ, 2009ರಿಂದ 2013ರವರೆಗೆ ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿಯೂ ಬೋಪಯ್ಯನವರನ್ನೇ ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸಮತ ನಿರ್ಣಯ ಮಂಡಿಸಿ ಅದರಲ್ಲಿ ಯಶಸ್ಸು ಕಂಡ ಬಳಿಕ ರಮೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವಿಶ್ವಾಸಮತ ನಿರ್ಣಯ, ಹಣಕಾಸು ಮಸೂದೆ ಮತ್ತು ಲೇಖಾನುದಾನ ನಿನ್ನೆ ವಿಧಾನಮಂಡಲದ ಉಭಯ ಸದನಗಳಲ್ಲೂ ಧ್ವನಿಮತದ ಮೂಲಕ ಅಂಗೀಕಾರ ಪಡೆದುಕೊಂಡಿದೆ. ಉಪ ಸ್ಪೀಕರ್ ಕೃಷ್ಣಾ ರೆಡ್ಡಿ ಅವರು ರಾಜ್ಯಪಾಲರು ಕಳುಹಿಸಿದ್ದ ದಿನಾಂಕವನ್ನು ಸದನದಲ್ಲಿ ಪ್ರಕಟಿಸಿ ಕಲಾಪವನ್ನು ಜುಲೈ 31ಕ್ಕೆ ಮುಂದೂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.