ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.16;

ಜೂನ್ 1 ರಿಂದ ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಕಳೆದ ವರ್ಷಾಂತ್ಯದಲ್ಲಿ ಪ್ರತಿ ಯೂನಿಟ್‌ಗೆ 14 ಪೈಸೆ ದರ ಹೆಚ್ಚಳ ಮಾಡಲಾಗಿತ್ತು. ಇದೇ ವರ್ಷದ ಜನವರಿಯಲ್ಲಿ ಪ್ರತಿ ಯೂನಿಟ್‌ಗೆ 1 ರೂಪಾಯಿ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಕೆಇಆರ್‌ಸಿ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್‌) ಸಂಸ್ಥೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು, ಆದರೆ ಆಗ ಕುಮಾರಸ್ವಾಮಿ ಅವರು ಅದಕ್ಕೆ ತಡೆ ಒಡ್ಡಿದ್ದರು.

ಆದರೆ ಚುನಾವಣೆ ಮುಗಿದ ಬಳಿಕ, ಆರ್ಥಿಕ ವರ್ಷ ಅಂತ್ಯವಾದ ನಂತರ ಜೂನ್ 1 ರಿಂದ ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಲು ಸರ್ಕಾರ ಯೋಜಿಸಿದ್ದು, ಜೂನ್ ಒಂದರಿಂದ ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 45-50 ಪೈಸೆ ಹೆಚ್ಚಳ ಆಗುವ ಸರ್ವ ಸಾಧ್ಯತೆ ಇದೆ.

ಪ್ರತಿ ವರ್ಷ ಏಪ್ರಿಲ್‌ನಲ್ಲಿಯೇ ವಿದ್ಯುತ್ ದರ ಹೆಚ್ಚಳವಾಗುತ್ತದೆ, ಆದರೆ ಚುನಾವಣೆ ಇರುವ ಕಾರಣ ಈ ಬಾರಿ ಸ್ವಲ್ಪ ತಡವಾಗಿ ಹೆಚ್ಚಳ ಮಾಡಲಾಗುತ್ತಿದೆ. ಕಳೆದ ವರ್ಷ ಎರಡು ಬಾರಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿತ್ತು, ಮೊದಲಿಗೆ ಮೇ ತಿಂಗಳಿನಲ್ಲಿ ಯೂನಿಟ್ ಒಂದಕ್ಕೆ 38 ಪೈಸೆ ಹೆಚ್ಚಳ ಮಾಡಿದ್ದರೆ, ಅಕ್ಟೋಬರ್ ವೇಳೆಗೆ 14 ಪೈಸೆ ಹೆಚ್ಚಳ ಮಾಡಲಾಗಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.