ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.29;

ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದ್ದು, ಕಬ್ಬು ಬೆಳೆಯುವ ರೈತರಿಗೆ ಸಬ್ಸಿಡಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಸಬ್ಸಿಡಿ ನೀಡಲು 6268 ಕೋಟಿ ರೂ.ಗಳನ್ನು ಖರ್ಚು ಮಾಡಲು ಅನುಮೋದನೆ ನೀಡಲಾಗಿದೆ.

ಸಕ್ಕರೆ ರಫ್ತಿಗಾಗಿ ಬೆಳೆಗಾರರಿಗೆ ಸಬ್ಸಿಡಿ ನೀಡಲಾಗುತ್ತದೆ. ಪ್ರತಿ ಮೆಟ್ರಿಕ್ ಟನ್‌ಗೆ 10,448 ರೂ. ಸಬ್ಸಿಡಿ ದೊರೆಯಲಿದ್ದು, ಇದು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾವಣೆಯಾಗಲಿದೆ.

ಸಕ್ಕೆರೆ ಕಾರ್ಖಾನೆಗಳು ರೈತರಿಂದ ಖರೀದಿ ಮಾಡುವ ಕಬ್ಬಿಗೆ ಕನಿಷ್ಠ ದರವನ್ನು 2019-20ನೇ ಸಾಲಿನಲ್ಲಿ ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಹ ಒಪ್ಪಿಗೆ ಕೊಡಲಾಗಿದೆ. ಅಕ್ಟೋಬರ್‌ನಿಂದ ಆರಂಭವಾಗಲಿರುವ ಮಾರುಕಟ್ಟೆ ವರ್ಷಕ್ಕೆ ಪ್ರತಿ ಕ್ವಿಂಟಾಲ್ ಕಬ್ಬಿನ ಎಫ್‌ಆರ್‌ಪಿ ದರವನ್ನು 275ಕ್ಕೆ ನಿಗದಿ ಮಾಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.