ಕೆ.ಎನ್.ಪಿ.ವಾರ್ತೆ,ನವದೆಹಲಿ,ಏ.15;

ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್ಸ್ ನಲ್ಲಿ ಸೈನಾ ನೆಹ್ವಾಲ್‌ ಚಿನ್ನದ ಪದಕ ಗೆದ್ದಿದ್ದಾರೆ.

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್‌ ಚಿನ್ನದ ಪದಕ ಗೆದ್ದಿದ್ದಾರೆ.

ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್ಸ್ ನಲ್ಲಿ, ವಿಶ್ವದ 3ನೇ ಶ್ರೇಯಾಂಕಿತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧುರನ್ನು ಮಣಿಸುವ ಮೂಲಕ ಸೈನಾ ನೆಹ್ವಾಲ್‌ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದು, ಪಿ.ವಿ.ಸಿಂಧು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಸೈನಾರ ಚಿನ್ನ, ಸಿಂಧುರ ಬೆಳ್ಳಿ ಪದಕದೊಂದಿಗೆ ಭಾರತ ಈ ಕ್ರೀಡಾಕೂಟದಲ್ಲಿ ಈವರೆಗೂ ಒಟ್ಟು 62 ಪದಕಗಳನ್ನು ಗೆದ್ದಿದೆ.