ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.27;
ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ಕಾಲುಗಳುಳ್ಳ ಅಪರೂಪದ ಗಂಡು ಮಗು ಜನಿಸಿದೆ.
ಕಳೆದ ರಾತ್ರಿ ಹೆರಿಗೆಗಾಗಿ ದಾಖಲಾಗಿದ್ದ ಸುಷ್ಮಾ ಎಂಬ ಮಹಿಳೆ ಮೂರು ಕಾಲುಗಳುಳ್ಳ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 3 ಕೆಜಿ ತೂಕದ ಮಗು ಆರೋಗ್ಯವಾಗಿದೆ. ಬಲಗಾಲಿನ ಪಕ್ಕದಲ್ಲಿ ಮತ್ತೊಂದು ಕಾಲು ಇದ್ದು, ಅದಕ್ಕೆ ಎರಡು ಪಾದಗಳಿವೆ.
ಮಗು ಹೀಗೆ ಜನಿಸಲು ಕಾರಣಗಳೇನು ಎಂಬುದನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳು ವಿವರಿಸಿದ್ದಾರೆ. ಗರ್ಭಾವಸ್ಥೆಯಲ್ಲಿ ಕೆಲವು ಚಿಕಿತ್ಸೆ ಪಡೆಯದಿರುವುದು ಹಾಗೂ ಸಂಬಂಧಿಕರನ್ನೇ ವಿವಾಹವಾಗುವುದರಿಂದ ಇಂತಹ ನೂನ್ಯತೆಯ ಶಿಶುಗಳು ಜನಿಸುತ್ತವೆ.
ಈಗ ಬಲಗಾಲಿನಲ್ಲಿ ಬೆಳೆದಿರುವ ಹೆಚ್ಚುವರಿ ಕಾಲನ್ನು ಶಸ್ತ್ರಚಿಕಿತ್ಸೆ ಮಾಡಿ ಬೇರ್ಪಡಿಸಲು ನಿರ್ಧರಿಸಿದ್ದೇವೆ. ಆದರೆ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ಹಿರಿಯ ಆರೋಗ್ಯ ಅಧಿಕಾರಿಗಳ ಅನುಮತಿ ಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.