ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.28;

ಆಡುತ್ತಿದ್ದ ಮಕ್ಕಳ ಮೇಲೆ ಮರಳಿನ ದಿಬ್ಬ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಕನಕಗಿರಿಯ ನವಲಿ ಗ್ರಾಮದಲ್ಲಿ ನಡೆದಿದೆ.

ಮೃತರು ಪುಣೆ ಮೂಲದ ಕೂಲಿ ಕಾರ್ಮಿಕರ ಮಕ್ಕಳಾದ ಸೋನು (7), ಸವಿತಾ (4) ಮತ್ತು ಕವಿತಾ (2) ಎಂದು ಗುರುತಿಸಲಾಗಿದೆ. ಕನಕಗಿರಿಯ ನವಲಿ ಬಳಿ ಇಟ್ಟಿಗೆ ಕಾರ್ಖಾನೆಯಲ್ಲಿ ಮಕ್ಕಳ ಪೋಷಕರು ಕೆಲಸದಲ್ಲಿ ನಿರತವಾಗಿದ್ದಾಗ ಕಾರ್ಖಾನೆ ಸಮೀಪವೇ ಮಕ್ಕಳು ಆಟವಾಡುತ್ತಿದ್ದರು.

ಆದರೆ ಆ ಸಮಯದಲ್ಲಿ ಆಕಸ್ಮಿಕವಾಗಿ ಮರಳಿನ ದಿಬ್ಬ ಕುಸಿದು ಬಿದ್ದು ಮರಳಿನೊಳಗೆ ಸಿಕ್ಕಿ ಉಸಿರುಗಟ್ಟಿದ ಪರಿಣಾಮ ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ಇನ್ನು ಘಟನೆ ನಡೆದ ವೇಳೆ ಒಟ್ಟು ಐದು ಮಕ್ಕಳು ಆಟವಾಡುತ್ತಿದ್ದರು. ಆದರೆ ಅದರಲ್ಲಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತಂತೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.