ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.04;

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನೂ ಮುಂದೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2018-19ರ ಆರ್ಥಿಕ ಸಮೀಕ್ಷೆ ಮಂಡನೆ ವೇಳೆ ತಿಳಿಸಿದರು.

ಅಸ್ಸಾಂ, ಬೆಂಗಾಳಿ, ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒಡಿಯಾ, ಪಂಜಾಬಿ, ತೆಲುಗು, ತಮಿಳು ಮತ್ತು ಉರ್ದುವಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ಆಫೀಸರ್ ಸ್ಕೆಲ್ 1 ಹಾಗೂ ಸಹಾಯಕರ ಹುದ್ದೆಗಳನ್ನು ಇಂಗ್ಲೀಷ್ ಮತ್ತು ಹಿಂದಿ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಕನ್ನಡಿಗರಿಗೂ ಅವಕಾಶ ಕಲ್ಪಿಸುವಂತೆ ಇತ್ತೀಚಿಗೆ ಸಂಸತ್ತಿನ ಉಭಯ ಸದನಗಳಲ್ಲಿ ಕರ್ನಾಟಕದ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಜಿ. ಸಿ. ಚಂದ್ರಶೇಖರ್ ಕೇಂದ್ರಸರ್ಕಾರವನ್ನು ಒತ್ತಾಯಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.