ಕೆ.ಎನ್.ಪಿ.ವಾರ್ತೆ,ಸಿನಿಸಮಾಚಾರ;

ಕನ್ನಡದ ಖ್ಯಾತ ಬರಹಗಾರ, ನಿರ್ದೇಶಕ ನಂಜುಂಡ ಕೃಷ್ಣ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. 52 ವರ್ಷದ ನಂಜುಂಡ ಅವರು ಡಯಾಬಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದರು.

ಕಳೆದ ಎರಡು ವಾರದ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಪ್ರಕಾಶ್ ರೈ ನಾಯಕನಾಗಿ ನಟಿಸಿದ್ದ ‘ಮನಸಲೂ ನೀನೆ ಕನಸಲೂ ನೀನೆ’ ಹಾಗೂ ರಾಜೇಶ್ ಕೃಷ್ಣನ್ ನಾಯಕನಾಗಿ ಕಾಣಿಸಿಕೊಂಡಿದ್ದ ‘ಮೆಲೋಡಿ’ ಚಿತ್ರಗಳನ್ನ ನಂಜುಂಡ ಅವರು ನಿರ್ದೇಶನ ಮಾಡಿದ್ದರು.

ನಿರ್ದೇಶನಕ್ಕಿಂತ ಹೆಚ್ಚು ಚಿತ್ರಕಥೆ ಮತ್ತು ಸಂಭಾಷಣೆಕಾರರಾಗಿ ಗುರುತಿಸಿಕೊಂಡಿದ್ದರು. ಅನೇಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿದ ಖ್ಯಾತಿಯೂ ಇವರಿಗೆ ಸಲ್ಲುತ್ತದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.