ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.28;
ಜಿಲ್ಲಾದ್ಯಂತ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರ ಮೇಲೆ ಒಟ್ಟು 28 ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳಲಾಗಿದೆ.
ಮಟಕಾ, ಜೂಜಾಟ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಮಾಜಘಾತಕರು ಭಾಗಿಯಾಗಿ ಸಾರ್ವಜನಿಕ ಶಾಂತತೆ ಮತ್ತು ಸುವ್ಯವಸ್ಥೆ ಕದಡುವ ಉದ್ದೇಶ ಹೊಂದಿದ್ದು, ಇದರ ನಿಯಂತ್ರಣಕ್ಕಾಗಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್‍ನಲ್ಲಿ ಒಟ್ಟು 28 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರ ಮೇಲೆ ದಾಳಿ ನಡೆಸಿ, ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಧಾರವಾಡ ಗ್ರಾಮೀಣ-9, ಗರಗ-2, ಅಳ್ನಾವರ-5, ಕುಂದಗೋಳ-4, ಗುಡಗೇರಿ-2, ಹುಬ್ಬಳ್ಳಿ ಗ್ರಾಮೀಣ-5, ಕಲಘಟಗಿ-1 ಒಟ್ಟು 28 ಪ್ರಕರಣಗಳನ್ನು ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
ಕಾನೂನು ಬಾಹಿರ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕಿ ಜಿ. ಸಂಗೀತಾ ತಿಳಿಸಿದ್ದಾರೆ.
ವರದಿ : ಚಂದ್ರು ಹಿರೇಮಠ ಧಾರವಾಡ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.