ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.30;

ಫೆಬ್ರವರಿ 17ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ 5ರಂದು ಬಜೆಟ್ ಮಂಡನೆಯಾಗಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಮಾಧುಸ್ವಾಮಿ, ಸಿಎಂ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆ 2020ರ ಜನವರಿ 20 ರಿಂದ 30 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದ ಅಧಿವೇಶನವನ್ನು ಮೂಂದೂಡಲಾಗಿದೆ. 

ಫೆ. 17ರಿಂದ 21 ರವರೆಗೆ ಅಧಿವೇಶನ ನಡೆಯಲಿದ್ದು, 17 ರಂದು ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲ ಅವರು ಭಾಷಣ ಮಾಡಲಿದ್ದಾರೆ.

ಮಾರ್ಚ್ 2 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 5ರಂದು ಹಣಕಾಸು ಇಲಾಖೆ ಜವಾಬ್ದಾರಿ ಹೊಂದಿರುವ ಸಿಎಂ ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.