ಕೆ.ಎನ್.ಪಿ.ವಾರ್ತೆ,ಹೊಸಪೇಟೆ,ಡಿ.01;

ರಾಜ್ಯದಲ್ಲಿ ಉಪಚುನಾವಣೆ ಕಾವು ಏರುತ್ತಿದೆ. ಬಿರುಸಿನ ಪ್ರಚಾರದ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಭರದಿಂದ ಸಾಗಿದೆ….ಅಂತೆಯೇ ಹೊಸಪೇಟೆಯಲ್ಲಿ ಉಪಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ವಿಜಯನಗರ ವಿಧಾನಸಭಾ ಕ್ಷೇತ್ರ ದ ಬಿಜೆಪಿ ಪಕ್ಷದ ಅಭ್ಯರ್ಥಿ ಆನಂದ್ ಸಿಂಗ್ ರೋಡ್ ಶೋ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ನ.30 ರಂದು ಆನಂದ್ ಸಿಂಗ್ ಬರೊಬ್ಬರಿ 18 ಲಕ್ಷ ಮೌಲ್ಯದ ಹಾರ್ಲೆ ಡೆವಿಡ್ಸನ್ ಬೈಕ್ ಹತ್ತಿ ಅಬ್ಬರದ ಪ್ರಚಾರ ನಡೆಸಿದರು. ಸುಮಾರು ಮೂರು‌ ನೂರಕ್ಕೂ ಹೆಚ್ಚು ಬೈಕ್ ಗಳು ರ್ಯಾಲಿಯಲ್ಲಿ ಬಾಗಿಯಾಗಿದ್ದವು.

ಹೊಸಪೇಟೆ ಹೊರ ವಲಯದ ಬಳ್ಳಾರಿ ರಸ್ತೆಯಲ್ಲಿರುವ ರೈಸ್ ಮಿಲ್ ನಿಂದ ಪ್ರಾರಂಭವಾದ ಬೈಕ್ ರ್ಯಾಲಿ ನಗರದ ಪ್ರತಿಯೊಂದು ಪ್ರಮುಖ ರಸ್ತೆಯಲ್ಲಿ ಸಂಚರಿಸಿತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.