ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.30;

ಅರಬ್ಬಿ ಸಮುದ್ರದಲ್ಲಿ ಕಳೆದ ವಾರ ಕಾಣಿಸಿಕೊಂಡಿದ್ದ ‘ಕ್ಯಾರ್’ ಚಂಡಮಾರುತವು ಒಮನ್‌ ನತ್ತ ತನ್ನ ದಿಕ್ಕು ಬದಲಿಸಿದರೂ ಮಂಗಳವಾರ ರಾತ್ರಿ ಮಂಗಳೂರು ಸಹಿತ ಜಿಲ್ಲೆಯ ಹಲವು ಕಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಮತ್ತೆ ಚಂಡಮಾರುತದ ಭೀತಿ ಎದುರಾಗಿದೆ.

ಎರಡು ದಿನದಿಂದ ಕರಾವಳಿ ತೀರದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿತ್ತು. ಮಂಗಳವಾರ ಹಗಲಿಡೀ ಬಿಸಿಲು ಆವರಿಸಿದ್ದರೆ ರಾತ್ರಿ ಗುಡುಗು-ಮಿಂಚಿನ ಆರ್ಭಟದಿಂದ ಮತ್ತೆ ಆತಂಕದ ಛಾಯೆ ಸೃಷ್ಟಿಸಿದೆ. ಜಿಲ್ಲೆಯ ಮಂಗಳೂರು, ಉಳ್ಳಾಲ, ದೇರಳಕಟ್ಟೆ, ಸುರತ್ಕಲ್, ಬಂಟ್ವಾಳ ಸಹಿತ ತಾಲೂಕು ಕೇಂದ್ರಗಳು ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಮಳೆಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅದು ಚಂಡಮಾರುತವಾಗಿ ಮತ್ತೆ ಅರಬ್ಬೀ ಸಮುದ್ರದಲ್ಲಿ ತನ್ನ ಆರ್ಭಟ ತೋರ್ಪಡಿಸುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆಯು ತಿಳಿಸಿತ್ತು. ಅದರಂತೆ ಮಂಗಳವಾರ ರಾತ್ರಿಯೇ ಮಳೆ, ಗುಡುಗು, ಮಿಂಚು ಕಾಣಿಸಿಕೊಂಡಿದ್ದು, ಅ.31ರವರೆಗೆ ಇದು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.