ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.22;

ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿಯ ನೂತನ ಶಾಸಕರು, ಭಾನುವಾರ ಪ್ರಮಾಣವಚನ ಸ್ವೀಕಾರ ಮಾಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಯ ಎಲ್ಲಾ 12 ಶಾಸಕರೂ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಗೋಕಾಕ್‌ ಶಾಸಕರಾದ ರಮೇಶ್ ಜಾರಕಿಹೊಳಿ, ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್, ಯಶವಂತ ಪುರ ಶಾಸಕರಾದ ಎಸ್. ಟಿ. ಸೋಮಶೇಖರ್, ಕೆಆರ್ ಪುರಂ ಶಾಸಕ ಭೈರತಿ ಬಸವರಾಜ್, ರಾಣೆಬೆನ್ನೂರು ಶಾಸಕ ಅರುಣ್ ಕುಮಾರ್, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್, ಕೆ. ಆರ್. ಪೇಟೆ ಶಾಸಕ ನಾರಾಯಣಗೌಡ, ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ, ವಿಜಯನಗರ ಶಾಸಕ ಆನಂದ್ ಸಿಂಗ್, ಹಿರೇಕೆರೂರು ಶಾಸಕ ಬಿ. ಸಿ. ಪಾಟೀಲ್, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದರು.
ಇದೇ ವೇಳೆ, ಹೊಸಕೋಟೆಯ ಬಿಜೆಪಿ ಬಂಡಾಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕೂಡಾ ಪ್ರಮಾಣ ವಚನ ಸ್ವೀಕರಿಸಿದರು.

ಆದ್ರೆ, ಕಾಂಗ್ರೆಸ್‌ನ ಇಬ್ಬರು ಶಾಸಕರು ಮತ್ತೊಂದು ದಿನ ಪ್ರಮಾಣ ವಚನ ಸ್ವೀಕಾರ ಮಾಡುವುದಾಗಿ ಸ್ವೀಕರ್ ಕಾಗೇರಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸಭಾಧ್ಯಕ್ಷ ಕಾಗೇರಿ ಸಂವಿಧಾನ ಕುರಿತು ಪುಸ್ತಕ ಮತ್ತು ಹೂಗುಚ್ಛ ನೀಡಿ ಅಭಿನಂದಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.