ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜು.16;

ಕನ್ನಡ ಸಾಹಿತ್ಯ ಪರಿಷತ್ ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ರೂ.50 ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 15 ರವರೆಗೆ ಅರ್ಜಿ ಸಲ್ಲಿಸಬಹುದು. 

ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ರೂ.25 ಶುಲ್ಕ ಪಾವತಿಸಿ ಅರ್ಜಿ ಪಡೆಯಬಹುದು.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ರೂ.30 ಮನಿ ಆರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಅರ್ಜಿಗಳನ್ನು ಕಸಾಪ ವೆಬ್ ಸೈಟ್ ಮೂಲಕವು ಪಡೆದು, ಅರ್ಜಿಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ :

ದೂರವಾಣಿ ಸಂಖ್ಯೆ : 080 – 26623584

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.