ಕೆ.ಎನ್.ಪಿ.ವಾರ್ತೆ,ನರೇಗಲ್ಲ,ಜು.24;

ಕನ್ನಡ ಸಾಹಿತ್ಯ ಪರಿಷತ್ತು ರೋಣ-ಗಜೇಂದ್ರಗಡ ತಾಲ್ಲೂಕ ಘಟಕ ಹಾಗೂ ನರೇಗಲ್ಲ ಹೋಬಳಿ ಘಟಕದ ವತಿಯಿಂದ ಪ್ರತಿ ತಿಂಗಳು ನಡೆಯುವ ತಿಂಗಳ ಸಾಹಿತ್ಯ ಚಿಂತನಾಗೋಷ್ಠಿಯ ವಾರ್ಷಿಕ ಸಂಭ್ರಮವನ್ನು ಜುಲೈ 24ರ ಬುಧವಾರ ಸಂಜೆ 5 ಗಂಟೆಗೆ ಪಟ್ಟಣದ ಹಿರೇಮಠ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು, ಜೀವನದಲ್ಲಿ ಜನಪದ ಎಂಬ ವಿಷಯದ ಕುರಿತು ಅಂತರಾಷ್ಟ್ರೀಯ ಜನಪದ ಕಲಾವಿದ ಜೀವನಸಾಬ ಬಿನ್ನಾಳ ಉಪನ್ಯಾಸ ನೀಡುವುದರೊಂದಿಗೆ ವಿಶೇಷ ಜನಪದ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕ ಅಧ್ಯಕ್ಷ ಐ.ಎ.ರೇವಡಿ, ಹೋಬಳಿ ಅಧ್ಯಕ್ಷ ಎಫ್.ಎನ್.ಹುಡೇದ, ಪಟ್ಟಣದ ಗುರು ಹಿರಿಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯ ಕಲಾವಿದರಿಗೆ ಗೌರವ ಸನ್ಮಾನ, ಕವನ ವಾಚನ, ಜನಪದ ಕಾರ್ಯಕ್ರಮಗಳು ಜರುಗಲಿವೆ ಎಂದು ಕಸಾಪ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಚಂದ್ರು ರಾಥೋಡ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.