ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.10;

ಪ್ರವಾಹ ಪರಿಸ್ಥಿತಿಯ ವೈಮಾನಿಕ ಸಮೀಕ್ಷೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳಗಾವಿಗೆ ತೆರಳಲಿದ್ದಾರೆ. ಬೆಳಗಾವಿ ನಗರದ ನಾನಾ ಕಡೆಗಳಿಗೆ ಭೇಟಿ ನೀಡಲಿದ್ದು, ಬೆಳಗಾವಿ, ಸಂಕೇಶ್ವರ ಮತ್ತಿತರ ಕಡೆಗಳಲ್ಲಿ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ರಾತ್ರಿ ಗೋವಾ ಮೂಲಕ ದೆಹಲಿಗೆ ಹಿಂತಿರುಗಲಿದ್ದಾರೆ.

ಹಣಕಾಸು ಸಚಿವರು ಆಗಿರುವ ನಿರ್ಮಲಾ ಸೀತಾರಾಮನ್ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರಿಂದ ರಾಜ್ಯಕ್ಕೆ ಹೆಚ್ಚುವರಿ ಪರಿಹಾರ ದೊರೆಯಬಹುದಾ ಎಂಬ ನಿರೀಕ್ಷೆಯಲ್ಲಿದ್ದಾರೆ ರಾಜ್ಯದ ಜನರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.