ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.03;

ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಲು ರಾಹುಲ್‌ ಗಾಂಧಿ ಸ್ಪಷ್ಟವಾಗಿ ನಿರಾಕರಿಸಿದ್ದರಿಂದ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಪಟ್ಟ ಒಲಿಯುವ ಸಾಧ್ಯತೆಯಿದೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯಲು ರಾಹುಲ್ ಗಾಂಧಿ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವುದು ಅನಿವಾರ್ಯವಾಗಿದೆ.

ಸಂಸತ್ತಿನ ಅಧಿವೇಶನದ ನಂತರ ಆಗಸ್ಟ್ 8 ಅಥವಾ 10ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಸೇರಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಭೆಯಲ್ಲಿ ರಾಹುಲ್ ಗಾಂಧಿ ಅವರ ರಾಜೀನಾಮೆ ಅನುಮೋದಿಸಿ ಹೊಸ ಅಧ್ಯಕ್ಷರ ಆಯ್ಕೆ ನಡೆಯುವ ಸಾಧ್ಯತೆ ಇದೆ. ಪಕ್ಷದ ಹೊಸ ಅಧ್ಯಕ್ಷರು ಆಗಸ್ಟ್ 15ರಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.