ಕೆ.ಎನ್.ಪಿ.ವಾರ್ತೆ,ಚಂಡೀಗಢ,ಅ.26;

ಮನೋಹರ್ ಲಾಲ್ ಖಟ್ಟರ್ ಅವರು ಅವಿರೋಧವಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ಆಯ್ಕೆಯಾಗಿದ್ದಾರೆ.

ಖಟ್ಟರ್ ಅವರು ಹರಿಯಾಣ ರಾಜ್ಯದ ಶಾಸಕಾಂಗ ಪಕ್ಷದ ನಾಯಕರು ಎಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಘೋಷಣೆ ಮಾಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರವಿಶಂಕರ್ ಪ್ರಸಾದ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಹಾಜರಿದ್ದರು. 

ಶಾಸಕಾಂಗ ಪಕ್ಷದ ನಾಯಕರಾದ ಬಳಿಕ ಹರಿಯಾಣ ರಾಜ್ಯಪಾಲ ಸತ್ಯದೇವೋ ನರೈನ್ ಆರ್ಯ ಅವರನ್ನು ಖಟ್ಟರ್ ಭೇಟಿಯಾಗಲಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಅ.27 ರಂದು ಮನೋಹರ್ ಲಾಲ್ ಖಟ್ಟರ್ ನೇತೃತ್ವದಲ್ಲಿ ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. ವಿಧಾನಸಭಾ ಫಲಿತಾಂಶ ಹೊರಬಿದ್ದ ಬಳಿಕ ಜನನಾಯಕ್ ಜನತಾ ಪಕ್ಷ (ಜೆಜೆಪಿ)ಯೊಂದಿಗೆ ಕೈಜೋಡಿಸಿರುವ ಬಿಜೆಪಿ, ಹರಿಯಾಣದಲ್ಲಿ ಸರ್ಕಾರ ರಚನೆ ಮಾಡುತ್ತಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.