ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜು.12;

ಜಿಲ್ಲೆಯ ಗಂಗಾವತಿ ತಾಲೂಕಿನ ದೇವಘಾಟ ಬಳಿಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿರುವ ರೈತರನ್ನು ಶರಣಪ್ಪ ಕುಷ್ಟಗಿ (40), ರಾಮಣ್ಣ (26) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಇಬ್ಬರು ರೈತರನ್ನು ಚಿಕಿತ್ಸೆಗಾಗಿ ಗಂಗಾವತಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಎಂದಿನಂತೆ ಜಮೀನುಗಳಲ್ಲಿ ಆಹಾರಕ್ಕಾಗಿ ಕರಡಿ ರಾತ್ರಿ ಗ್ರಾಮಕ್ಕೆ ಆಗಮಿಸಿದೆ. ಅದರೆ ವಾಪಸ್ ಬೆಟ್ಟದ ಕಡೆಗೆ ತೆರಳದೇ ಜಮೀನಿನಲ್ಲಿ ಉಳಿದಿದೆ. ಬಳಿಕ ರೈತರು ಜಮೀನುಗಳಲ್ಲಿ ಕೆಲಸ ಮಾಡಲು ಹೋಗಿರುವ ವೇಳೆ ಈ ದಾಳಿ ಮಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ, ಜಮೀನಿನಲ್ಲಿದ್ದ ಕರಡಿಯನ್ನು ಪಟಾಕಿ ಸಿಡಿಸಿ, ಗುಡ್ಡಗಾಡು ಪ್ರದೇಶದ ಕಡೆಗೆ ಓಡಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.