ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಫೆ.06;

ಶ್ರೀನಗರ ಕಾಲೋನಿಯ ಶ್ರೀ ಸಾಯಿ ಸೂರ್ಯ ಅಪಾರ್ಟ್ ಮೆಂಟ್ ನಲ್ಲಿ ನೊಂದ ಖ್ಯಾತ ಕಿರುತೆರೆ ನಟಿ ಜಾನ್ಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪವಿತ್ರ ಬಂಧನಂ ಎಂಬ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ಜಾನ್ಸಿಗೆ ಸೂರ್ಯ ಎಂಬಾತನ ಜೊತೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿದ್ದ ಜಾನ್ಸಿಯನ್ನು ಕಂಡ ನೆರೆ ಹೊರೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕೃಷ್ಣ ಜಿಲ್ಲೆ ಮುಂಡನಪಲ್ಲಿ ಮೂಲದ ಜಾನ್ಸಿ ಮತ್ತು ಸೂರ್ಯ ಅಲಿಯಾಸ್ ನಾಣಿ ಜೊತೆ ಮದುವೆಗೆ ನಾಣಿ ಪೋಷಕರು ಒಪ್ಪಿರಲಿಲ್ಲ. ಇದರಿಂದಾಗಿ ಸೂರ್ಯ ಜಾನ್ಸಿಯಿಂದ ಅಂತರ ಕಾಯ್ದುಕೊಂಡಿದ್ದ ಎನ್ನಲಾಗಿದೆ. ಹೀಗಾಗಿ ಖಿನ್ನತೆಗೊಳಗಾಗಿ ಜಾನ್ಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಜಾನ್ಸಿ ಪೋಷಕರು ಆರೋಪಿಸಿದ್ದಾರೆ. ಜಾನ್ಸಿ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸೂರ್ಯ ನಾಪತ್ತೆಯಾಗಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.