ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.04;
ಯುವತಿಯನ್ನು ಪ್ರೀತಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿ ಪ್ರಿಯಕರ ವಂಚನೆ ಮಾಡಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಿಸಿದ್ದ ಪ್ರಿಯಕರನನ್ನು ಚಂದ್ರಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕುಣಗಲ್ ರಸ್ತೆ ಬಳಿ ಚಂದ್ರಲೇಔಟ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೊಯ್ಸಳ ನಗರ ನಿವಾಸಿ ರವಿಕಿರಣ್ ಬಂಧಿತ ಆರೋಪಿ.
ಮಂಜುಳಾ ಎಂಬಾಕೆಯನ್ನು ಪ್ರೀತಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದ ರವಿಕಿರಣ್ ಬಳಿಕ ಆಕೆಯಿಂದ ದೂರವಾಗಲು ಯತ್ನಿಸಿದ್ದನು. ಇದರಿಂದ ಬೇಸತ್ತಿದ್ದ ಮಂಜುಳಾ ವಂಚಿಸಿದ ಪ್ರಿಯಕರನ ವಿರುದ್ಧ ಚಂದ್ರಲೇಔಟ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ವಂಚನೆ ಆರೋಪದಡಿ ದೂರು ದಾಖಲಿಸಿದ್ದರು ಎನ್ನಲಾಗಿದೆ.
ಮಂಜುಳಾ ಎಂಬಾಕೆ ತನ್ನ ಪ್ರಿಯಕರ ರವಿಕಿರಣ್ ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಡೆತ್ ನೋಟ್ ಬರೆದು ಭೈರವೇಶ್ವರನಗರದ ನಿವಾಸದಲ್ಲಿ ನಿನ್ನೆ ನೇಣಿಗೆ ಶರಣಾಗಿದ್ದಳು.
ವಾಣಿಜ್ಯ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾ ಹಾಗೂ ದೊರೆಸ್ವಾಮಿಪಾಳ್ಯದ ರವಿಕಿರಣ್ ನಡುವೆ ಪ್ರೀತಿ ಬೆಳೆದಿತ್ತು. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ರವಿಕಿರಣ್, ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು, ಮದುವೆಯಾಗದೆ ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮಂಜುಳಾ ಅವರ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ. ಇನ್ನು ಪ್ರಕರಣ ಸಂಬಂಧ ರವಿಕಿರಣ್ ನನ್ನು ಚಂದ್ರಲೇಔಟ್ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.