ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.17;

ನವೆಂಬರ್ 18 ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸದನ ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳು ಸಹಕರಿಸುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಸ್ಪೀಕರ್, ರಾಜಕೀಯ ಸಲಹೆಗಾರರಿಗೆ ಮೊದಲು ವ್ಯವಹಾರ ಸಲಹಾ ಸಮಿತಿಯಲ್ಲಿ ಚರ್ಚಿಸಲು ಸಲಹೆ ನೀಡಿದರು. ಈ ಬಾರಿ ಗರಿಷ್ಠ ಸಂಖ್ಯೆಯ ಸಮಸ್ಯೆಗಳನ್ನು ಚರ್ಚೆಗೆ ತೆಗೆದುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ನವೆಂಬರ್ 18ರಿಂದ ಡಿಸೆಂಬರ್ 13ರವರೆಗೂ ಕಲಾಪ ನಡೆಯಲಿದ್ದು, ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಬಿಜೆಪಿ ಸರ್ಕಾರದ ಅನೇಕ ಕಾಯ್ದೆಗಳು ಅನುಮೋದನೆಯಾಗುವ ಸಾಧ್ಯತೆ ಇದೆ.

ಆರ್ಥಿಕ ಪ್ರಗತಿ ಕುಸಿತ, ಉದ್ಯೋಗ ಕೊರತೆ ಮತ್ತಿತರ ಸಮಸ್ಯೆಗಳನ್ನು ಎತ್ತುವ ಮೂಲಕ ಪ್ರತಿಪಕ್ಷಗಳು ಸರ್ಕಾರ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.