ಕೆ.ಎನ್.ಪಿ.ವಾರ್ತೆ,ಮಂಡ್ಯ,ಮೇ.19;

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಚುನಾವಣೆ ಬಾರೀ ಕುತೂಹಲ ಮೂಡಿಸಿರುವ ಹಿನ್ನೆಲೆ ಫಲಿತಾಂಶದ ದಿನ ಗಲಾಟೆಗಳು ನಡೆದು ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಭದ್ರತೆ ಒದಗಿಸುವಂತೆ ಕೋರಿ ಜಿಲ್ಲಾಧಿಕಾರಿ ಚುನಾವಣಾ ಆಯೋಗಕ್ಕೆ ಪತ್ರ ಸಲ್ಲಿಸಿದ್ದು, ಈ ಬಗ್ಗೆ ಹೆಚ್ಚು ಗಮನಹರಿಸಿದ ಚುನಾವಣಾ ಆಯೋಗವು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ 2 ದಿನ ಮೇ.23, 24 ರಂದು ನಿಷೇಧಾಜ್ಞೆ ಹೊರಡಿಸಿದೆ.

ಆದ್ದರಿಂದ ಫಲಿತಾಂಶದ ದಿನ ಸಭೆ ಸೇರುವುದು, ವಿಜಯೋತ್ಸವ ಆಚರಣೆ ಮಾಡುವುದು, ಪಟಾಕಿ ಸಿಡಿಸುವುದು, ಗುಂಪು ಸೇರುವುದು ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಸಿಆರ್ ಪಿಎಫ್ ಯೋಧರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗಾಗಿ ಆಯೋಜಿಸುವಂತೆ ಆಯೋಗ ಸೂಚನೆ ನೀಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.