ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.24;

ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮುಂದುವರೆಯುತ್ತದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ.

ಪ್ರತಿಪಕ್ಷ ಬಿಜೆಪಿಯ ಆಫರೇಷನ್ ಕಮಲ ಯಶಸ್ವಿ ಆಗುವುದಿಲ್ಲ. ಸರ್ಕಾರ ಬೀಳಿಸುವ ಪ್ರಯತ್ನ ವಿಫಲ ಆಗಲಿದೆ. ರಾಜ್ಯಸರ್ಕಾರಕ್ಕೆ ಜನಾದೇಶ ಇದ್ದು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಗೃಹ ಸಚಿವ ಎಂಬಿ ಪಾಟೀಲ್, ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.