ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10;

ಆಗಸ್ಟ್ 12 ರಂದು ಹುಬ್ಬಳ್ಳಿಯಲ್ಲಿ ಜರುಗುವ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರದ ಗಣ್ಯಾತೀಗಣ್ಯರು, ರಾಜ್ಯದ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದು, ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಮತ್ತು ಕಟ್ಟುನಿಟ್ಟಾಗಿ ಶಿಷ್ಟಚಾರ ಪಾಲಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಎಂ. ದೀಪಾ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತವು ನ್ಯಾಯಾಂಗದ ಅಧಿಕಾರಿಗಳೊಂದಿಗೆ ಅನೇಕ ಸಭೆ ನಡೆಸಿದೆ.

ವಿವಿಧ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಿ ವಸತಿ, ವೇದಿಕೆ, ಸಾರಿಗೆ, ಭದ್ರತೆ ಶಿಷ್ಟಾಚಾರ ಪಾಲನೆಯಂತಹ ಸಮಿತಿಗಳನ್ನು ಈಗಾಗಲೇ ರಚಿಸಲಾಗಿದೆ. ತಮಗೆ ವಹಿಸಿದ ಕರ್ತವ್ಯಗಳನ್ನು ಜಾಗೃತಿಯಿಂದ ಅಧಿಕಾರಿಗಳು ನಿರ್ವಹಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಡಿಸಿಪಿ ರೇಣುಕಾ ಸುಕುಮಾರನ್ ಹಾಗೂ ಸಿಇಓ ಸ್ನೇಹಲ್ ಆರ್. ಮಾತನಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಮತ್ತು ಉಪವಿಭಾಗಾಧಿಕಾರಿ ಮೊಹಮ್ಮದ ಜುಬೇರ್‍ಮ ಕಂದಾಯ, ಆರೋಗ್ಯ, ಸಾರಿಗೆ, ಪೊಲೀಸ್, ಲೋಕೋಪಯೋಗಿ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ : ಚಂದ್ರು ಹರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.