ಕೆ.ಎನ್.ಪಿ.ವಾರ್ತೆ,ಗಂಗಾವತಿ,ಡಿ.20;

ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಡಿ.೨೨ ರಂದು‌ ಬೆಳಿಗ್ಗೆ ೧೦.೩೦ಕ್ಕೆ ರಾಘವೇಂದ್ರ ಮಂಗಳೂರು ಅವರ ‘ಲಾಟರಿ ಹುಡುಗ’ ಕಥಾ ಸಂಕಲನ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಂಗಾವತಿ, ಇಂದಿರೇಶ ಪ್ರಕಾಶನ ಗಂಗಾವತಿ ಇವರ ಸಹಯೋಗದಲ್ಲಿ ರಾಘವೇಂದ್ರ ಮಂಗಳೂರು ಅವರ ಚೊಚ್ಚಲ ಕಥಾ ಸಂಕಲನ ‘ಲಾಟರಿ ಹುಡುಗ’ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಖ್ಯಾತ ಸಾಹಿತಿ ದಾವಣಗೆರೆಯ ಡಾ.ಆನಂದ ಋಗ್ವೇದಿ ಪುಸ್ತಕ ಲೋಕಾರ್ಪಣೆ ಮಾಡುವರು. ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರು ಕೃತಿ ಪರಿಚಯ ಮಾಡುವರು.

ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷರಾದ ರಾಜಶೇಖರ ಅಂಗಡಿ ಕಾರ್ಯಕ್ರಮ ಉದ್ಘಾಟಿಸುವರು. ಗಂಗಾವತಿ ತಾಲೂಕ ಕಸಾಪ ಅಧ್ಯಕ್ಷರಾದ ಎಸ್.ಬಿ.ಗೊಂಡಬಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಸಾಹಿತಿ ಗುಂಡೂರು ಪವನ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಲೇಖಕರಾದ ರಾಘವೇಂದ್ರ ಮಂಗಳೂರು ಹಾಗೂ ಇನ್ನಿತರರು ಉಪಸ್ಥಿತರಿರುವರು.

ಸಾಹಿತ್ಯ ಮಿತ್ರರು, ಕನ್ನಡ ಪ್ರೇಮಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ತಾಲೂಕ ಕ.ಸಾ.ಪ ಅಧ್ಯಕ್ಷರಾದ ಎಸ್.ಬಿ.ಗೊಂಡಬಾಳ ಹಾಗೂ ಇಂದಿರೇಶ ಪ್ರಕಾಶನ ದ ಗುಂಡೂರು ಪವನ್ ಕುಮಾರ ಪ್ರಕಟಣೆಯಲ್ಲಿ ಕೋರಿದ್ದಾರೆ. ಬಿಡುವು ಮಾಡಿಕೊಂಡು ಭಾಗವಹಿಸಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.