ಕೆ.ಎನ್.ಪಿ.ವಾರ್ತೆ,ಮೈಸೂರು,ಆ.22;

ಮದುವೆ ಸಮಾರಂಭ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮದುವೆ ದಿಬ್ಬಣದ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದೆ.

ಟಿ.ನರಸೀಪುರ ತಾಲೂಕಿನ ಗರ್ಗೆಶ್ವರಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮದುವೆ ಬಸ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿ. ನರಸೀಪುರ ಪಟ್ಟಣದ ಚಿಕ್ಕಮ್ಮ ತಾಯಿ ಛತ್ರದಲ್ಲಿ ಮದುವೆ ಮುಗಿಸಿ ಬಸ್‌ನಲ್ಲಿ ನರಸೀಪುರದ ಚೋರನಹಳ್ಳಿಗೆ ವಾಪಾಸ್ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಟಿ. ನರಸೀಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.