ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.01;

ಸ್ವಂತ ಮಗ-ಸೊಸೆಯ ಕಿರುಕುಳದಿಂದ ಬೇಸತ್ತು ವೃದ್ದ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

ಗಿರಿನಗರ ನಿವಾಸಿ ಬಿಇಎಲ್‌ನ ನಿವೃತ್ತ ಅಧಿಕಾರಿ ಕೃಷ್ಣಮೂರ್ತಿ(70) ಅವರ ಪತ್ನಿ ಸ್ವರ್ಣಮೂರ್ತಿ (68) ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತಂತೆ ಆರೋಪಿಗಳಾದ ಸೊಸೆ ಸ್ನೇಹ ಹಾಗೂ ಮಗ ಮಂಜುನಾಥ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಕಳೆದ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಪುತ್ರ ಸಾಫ್ಟ್ ವೇರ್ ಇಂಜಿನಿಯರ್ ಮಂಜುನಾಥ್‌ ಮತ್ತು ಸೊಸೆ ಸ್ನೇಹಾ ಸೂರ್ಯನಾರಾಯಣ ಅವರುಗಳು ನಮಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ದೈಹಿಕ, ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಕೃಷ್ಣಮೂರ್ತಿತಾವು ಸಾಯುವುದಕ್ಕೆ ಮುನ್ನ ಮನೆಯ ಗೋಡೆ ಮೇಲೆ ಬರೆದು ಸಹಿ ಮಾಡಿದ್ದರು. ಅಲ್ಲದೆ ಸ್ವರ್ಣಮೂರ್ತಿ ತಮ್ಮ ಹಣೆ ಮೇಲೆ “ನನ್ನನ್ನು ಕ್ಷಮಿಸು” ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.