ಕೆ.ಎನ್.ಪಿ.ವಾರ್ತೆ,ತಿರುವನಂತಪುರಂ,ಮೇ.27;

ಮಗಳ ಮದುವೆಯ ಸಮಾರಂಭದಲ್ಲಿ ಹಾಡುತ್ತಲೇ ಸಬ್ ಇನ್ಸ್ ಪೆಕ್ಟರ್ ಒಬ್ಬರು ಮೃತಪಟ್ಟ ದಾರುಣ ಘಟನೆ ಕೊಲ್ಲಂ ಜಿಲ್ಲೆಯ ನೀಂದಕಾರದಲ್ಲಿ ನಡೆದಿದೆ.

ತಿರುವನಂತಪುರದ ಸಬ್ ಇನ್ಸ್ ಪೆಕ್ಟರ್ (55) ವಿಷ್ಣು ಪ್ರಸಾದ್ ಮೃತಪಟ್ಟ ದುರ್ದೈವಿ. ತನ್ನ ಕಿರಿಯ ಮಗಳ ಮದುವೆ ಸಮಾರಂಭದಲ್ಲಿ ಹಾಡುತ್ತಿದ್ದ ವಿಷ್ಣು ಪ್ರಸಾದ್ ಮಧ್ಯದಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಬದುಕುಳಿಯಲಿಲ್ಲ.

ಹೃದಯಾಘಾತದಿಂದ ವಿಷ್ಣುಪ್ರಸಾದ್ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಇಂದು ವಿಷ್ಣುಪ್ರಸಾದ್ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ವಿಷ್ಣುಪ್ರಸಾದ್ ರವರು ಹೆಂಡತಿ ಸುಷ್ಮಾ ಹಾಗೂ ಮಕ್ಕಳಾದ ಆರ್ಚಾ, ಅನುಪ್ರಸಾದ್, ಹಾಗೂ ಆರ್ಯ ಪ್ರಸಾದ್ ಅವರನ್ನು ಅಗಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.